
ಹುಬ್ಬಳ್ಳಿ: ಅವಳಿನಗರದ ಸಂಚಾರಿ ವ್ಯವಸ್ಥೆ ಸುಧಾರಿಸಲು ಐಐಟಿ, ಬಿವ್ಹಿಬಿ, ಎಸ್’ಡಿಎಂ ಇಂಜಿನಿಯರಿಂಗ್ ಕಾಲೇಜು ನೇತೃತ್ವದಲ್ಲಿ ಸಮಗ್ರ ವರದಿ ತಯಾರಿಸಿ, ಸರ್ಕಾರದಿಂದ ಅನುದಾನ ಕೇಳಲಾಗುವುದು. ತದನಂತರ ಸಂಚಾರಿ ನಿಯಮಗಳ ಪಾಲನೆ ಮತ್ತು ಅಭಿವೃದ್ಧಿಗೆ ಒತ್ತು ಕೊಡಲಾಗುವುದು ಎಂದು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿದರು.
ಹುಬ್ಬಳ್ಳಿ-ಧಾರವಾಡ ರಾಜ್ಯದಲ್ಲಿ ಅತಿವೇಗವಾಗಿ ಬೆಳವಣಿಗೆ ಆಗುತ್ತಿರುವ ನಗರ, ಇಲ್ಲಿ ಪ್ರತಿನಿತ್ಯ ಒಂದಿಲ್ಲೊಂದು ಅಪರಾಧ ಕೃತ್ಯಗಳು ನಡದೆ ನಡೆಯುತ್ತವೆ. ಈ ಹಿನ್ನೆಲೆಯಲ್ಲಿ ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಹು-ಧಾ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಕಮಿಷನರ್ ಆಗಿ ನೇಮಕಗೊಂಡ ನಂತರ ಕೈಗೊಂಡ ಕ್ರಮಗಳ ಕುರಿತು ಇಂದು ಪತ್ರಿಕಾ ಭವನದಲ್ಲಿ ನಡೆದ ಮಿಟ್ ದ ಪ್ರೇಸ್‘ನಲ್ಲಿ ಭಾಗಿಯಾಗಿ ಅವರು ಮಾತನಾಡಿದರು.
ಹು-ಧಾ ಅವಳಿನಗರದಲ್ಲಿನ ಸಂಚಾರಿ ವ್ಯವಸ್ಥೆ ಬಗ್ಗೆ ನನಗೂ ಅಸಮಾಧಾನವಿದೆ. ಇಲ್ಲಿ ಅಭಿವೃದ್ಧಿ ಕಾಮಗಾರಿ, ಪ್ಲೈಓವರ್ ಕಾಮಗಾರಿ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ವಿವಿಧ ಇಲಾಖೆಯ ಸಹಕಾರದೊಂದಿಗೆ ಸಂಚಾರಿ ವ್ಯವಸ್ಥೆ ಸುಧಾರಿಸಲಾಗುವುದು ಎಂದರು.
ಹುಬ್ಬಳ್ಳಿ-ಧಾರವಾಡ ಅವಳಿನಗರದಲ್ಲಿ ಕ್ರೈಂ ರೇಟ್ ತಗ್ಗಿಸುವ ಹಾಗೂ ಡ್ರಗ್ಸ್ ಪ್ರಕರಣಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸಾಕಷ್ಟು ಕ್ರಮಗಳನ್ನು ಜರುಗಿಸಿದ್ದೇವೆ. ಡ್ರಗ್ಸ್ ಹಾಗೂ ಗಾಂಜಾ ಪ್ರಕರಣದಲ್ಲಿ ಬಹುತೇಕರನ್ನು ತಪಾಸಣೆಗೆ ಒಳಪಡಿಸಿದಾಗ ಶೇ.45 ರಷ್ಟು ಗಾಂಜಾ ಹಾಗೂ ಡ್ರಗ್ಸ್ ಅನುಭೋಗಿಸಿರುವ ದಾಖಲೆ ಲಭ್ಯವಾಗಿದೆ. ಹೆತ್ತವರು ಕೂಡ ಇಂತಹ ಪ್ರಕರಣವನ್ನು ಪೊಲೀಸ್ ಇಲಾಖೆ ಭೇದಿಸಿರುವ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ ಎಂದರು.
ಅವಳಿನಗರದಲ್ಲಿ 25 ಗ್ಯಾಂಗ್ ಗಳಿವೆ. ಅಧೀನ ರೌಢಿಗಳು ಅಪರಾಧ ಮಾಡಿದಾಗ ಅದಕ್ಕೆ ಸಂಬಂಧಿಸಿದಂತೆ ಮುಖ್ಯಗಳು ಇದರಲ್ಲಿ ಆರೋಪಿಯನ್ನಾಗಿ ಬಂಧಿಸಲು ಸಾಧ್ಯವಾಗುವುದಿಲ್ಲ. ಹಾಗಾಗಿ ಯಾರೇ ಅಪರಾಧ ಮಾಡಿದ್ರು ಅಂತವರ ವಿರುದ್ಧ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಈ ಬೀಟ್ ವ್ಯವಸ್ಥೆ ಉತ್ತಮವಾಗಿದೆ. ಇದನ್ನು ಸುಧಾರಿಸುವ ಕ್ರಮ ಕೈಗೊಳ್ಳಲಾಗುವುದು. ಬೀದರ್-ಮಂಗಳೂರು ಘಟನೆ ಆಧರಿಸಿ ಹು-ಧಾ ಸಿಬ್ಬಂದಿಗಳಿಗೆ ಗನ್ ತರಭೇತಿ ನೀಡಿ, ಚೆಕ್ ಪೋಸ್ಟ್ ಮಾಡಿ ರಾತ್ರಿ ಗಸ್ತು ಹೆಚ್ಚಿಸಿದ್ದೇವೆ ಎಂದು ಹೇಳಿದರು.
ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಮಹಿಳೆಯರ ರಕ್ಷಣೆಗಾಗಿ ಚೆನ್ನಮ್ಮ ಪಡೆ ಕಾರ್ಯನಿರ್ವಹಣೆ ಮಾಡುತ್ತಿದೆ. ಇದು ನಿರಂತರವಾದ ಪ್ರಕ್ರಿಯೆ ಆಗಿದೆ. ಮುಂದಿನ ದಿನಗಳಲ್ಲಿ ಇದಕ್ಕೆ ಒತ್ತು ನೀಡಿ ಅಧಿಕಾರಿಗಳು ಇದರಲ್ಲಿ ಭಾಗಿಯಾಗಲು ತಿಳಿಸುತ್ತೇವೆ. ಚೆನ್ನಮ್ಮ ಪಡೆಯನ್ನು ಸುವ್ಯವಸ್ಥೆಗೊಳಿಸುವ ಕೆಲಸ ಮಾಡಲಾಗುವುದು. ರಾಜ್ಯದಲ್ಲಿಯೇ 112 ವ್ಯವಸ್ಥೆಯಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸರು ಮೊದಲ ಸ್ಥಾನದಲ್ಲಿದ್ದಾರೆ ಎಂದು ತಿಳಿಸಿದರು.
ಫೈರಿಂಗ್ ವಿಚಾರವಾಗಿ ಮಾತನಾಡಿದ ಕಮಿಷನರ್, ಯಾವುದೇ ಅಪರಾಧ ಮಾಡಿದ ಆರೋಪಿಯನ್ನು ಬಂಧಿಸುವುದು ಪೊಲೀಸರ ಮುಖ್ಯ ಕರ್ತವ್ಯ. ಈ ನಿಟ್ಟಿನಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಲು ಹೋದ ಸಂದರ್ಭದಲ್ಲಿ ಎದುರಾಗುವ ಸಂಘರ್ಷದಲ್ಲಿ ಅನಿವಾರ್ಯವಾಗಿ ಆತ್ಮರಕ್ಷಣೆಗೆ ಪೊಲೀಸರು ಫೈರಿಂಗ್ ಮಾಡುವುದು ಅನಿವಾರ್ಯವಾಗಿದೆ. ಆ ನಿಟ್ಟಿನಲ್ಲಿ ಅವಳಿನಗರದಲ್ಲಿ ಪೊಲೀಸರು ಫೈರಿಂಗ್ ಮಾಡಿದ್ದಾರೆ.
ಅಂಗನವಾಡಿ ಆಹಾರ ಸಂಗ್ರಹದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಈ ಪ್ರಕರಣದಲ್ಲಿ ಪ್ರಮುಖ ಆರೋಪಿಗಳ ಬಂಧನವಾಗಿಲ್ಲ. ಆದ್ರೆ ಆರೋಪಿಗಳ ಬಂಧನದ ಪ್ರಕ್ರಿಯೆ ನಿರಂತರವಾಗಿದೆ. ನಮ್ಮ ಮೇಲೆ ಯಾವುದೇ ಒತ್ತಡವಿಲ್ಲ. ಪೊಲೀಸ್ ಇಲಾಖೆ ಸ್ವತಂತ್ರವಾಗಿ ಕೆಲಸ ಮಾಡುತ್ತಿದೆ ಎಂದು ಕಮಿಷನರ್ ಎನ್.ಶಶಿಕುಮಾರ್ ಹೇಳಿದರು.
ಈ ಸಂವಾದದಲ್ಲಿ ಪತ್ರಕರ್ತರ ಸಂಘದಿಂದ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಲೋಚನೇಶ ಹೂಗಾರ, ಪ್ರಧಾನ ಕಾರ್ಯದರ್ಶಿ ಸುಶಿಲೇಂದ್ರ ಕುಂದರಗಿ, ಖಜಾಂಚಿ ಬಸವರಾಜ ಹೂಗಾರ, ಹಿರಿಯ ಪತ್ರಕರ್ತರಾದ ಅಬ್ಬಾಸ್ ಮುಲ್ಲಾ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.