ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ನಡುವೆ ರಾಷ್ಟ್ರೀಯ ಪಕ್ಷಗಳ ನಾಯಕರ ದ್ವೇಷ ಭಾಷಣ, ಮತದಾರರಿಗೆ ಆಮಿಷ ಹಾಗೂ ಪ್ರಚಾರಕ್ಕೆ ಮಕ್ಕಳ ಬಳಕೆ ಸೇರಿದಂತೆ ಗಂಭೀರ ಸ್ವರೂಪದ ಚುನಾವಣಾ ಮಾದರಿ ಸಂಹಿತೆ ಉಲ್ಲಂಘನೆ ಸಂಬಂಧ ಚುನಾವಣಾ ಆಯೋಗವು ಈವರೆಗೆ 189 ಪ್ರಕರಣಗಳನ್ನು ದಾಖಲಿಸಿದೆ.
ದ್ವೇಷ ಭಾಷಣದ ಸಂಬಂಧ ಕಾಂಗ್ರೆಸ್, ಬಿಜೆಪಿ ನಾಯಕರು ಚುನಾವಣಾ ಆಯೋಗಕ್ಕೆ ದೂರು ಹಾಗೂ ಪ್ರತಿದೂರು ಕೊಟ್ಟಿದ್ದರು. ಈ ದೂರುಗಳನ್ನು ಪರಿಶೀಲಿಸಿದ ಆಯೋಗವು ಒಟ್ಟಾರೆ 23 ಪ್ರಕರಣಗಳನ್ನು ದಾಖಲಿಸಿದೆ.
ಮತದಾರರಿಗೆ ಆಮಿಷವೊಡ್ಡಿದ ಆರೋಪದಡಿ ಒಟ್ಟು 28 ಪ್ರಕರಣ ದಾಖಲಿಸಲಾಗಿದೆ. ರಾಜಕೀಯ ಪಕ್ಷಗಳು ಚುನಾವಣಾ ಪ್ರಚಾರಕ್ಕೆ ಮಕ್ಕಳನ್ನು ಬಳಸಿಕೊಳ್ಳುತ್ತವೆ. ಆದರೆ, ಕಾನೂನು ಪ್ರಕಾರ ಅಪರಾಧವಾಗಿದೆ. ಈ ಸಂಬಂಧ ಕಾಂಗ್ರೆಸ್ ವಿರುದ್ಧ 7, ಬಿಜೆಪಿ ವಿರುದ್ಧ 7 ಹಾಗೂ ಪಕ್ಷೇತರ ಅಭ್ಯರ್ಥಿ ವಿರುದ್ಧ 1 ಪ್ರಕರಣ ದಾಖಲಾಗಿದೆ.
ದ್ವೇಷ ಭಾಷಣದಲ್ಲಿ ಬಿಜೆಪಿ 12, ಕಾಂಗ್ರೆಸ್ 9, ಜೆಡಿಎಸ್ 2, ಮತದಾರರಿಗೆ ಆಮಿಷದ ಪ್ರಕರಣದಲ್ಲಿ ಬಿಜೆಪಿ 8, ಕಾಂಗ್ರೆಸ್ 9, ಜೆಡಿಎಸ್ 3, ಪಕ್ಷೇತರ 8, ಧಾರ್ಮಿಕ ಸ್ಥಳ ದುರುಪಯೋಗದಲ್ಲಿ ಬಿಜೆಪಿ 8, ಕಾಂಗ್ರೆಸ್ 6, ಜೆಡಿಎಸ್ 1 ಕೇಸ್ ದಾಖಲಾಗಿವೆ.