ಹುಬ್ಬಳ್ಳಿ: ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಯೊರ್ವನ ಹತ್ಯೆ ಗೈದಿರುವ ಘಟನೆ ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೃತನನ್ನು ಮಂಟೂರ ರಸ್ತೆಯ ನಿವಾಸಿ ಶಾಮ್ಯೂಲ್ (35) ಎಂಬು ಗುರುತಿಸಲಾಗಿದೆ. ಗುರುವಾರ ತಡರಾತ್ರಿ ಈ ಹತ್ಯೆ ನಡೆದಿರಬಹುದೆಂದು ಅಂದಾಜಿಸಲಾಗಿದೆ.
ಇಲ್ಲಿನ ರಿಂಗ್ ರೋಡ್ ಬಳಿಯಲ್ಲಿ ಲಾಡ್ ನಿಂದ ಹೊಡೆದು ಕೊಲೆ ಮಾಡಲಾಗಿದ್ದು, ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬೆಂಡಿಗೇರಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಇನ್ನು ಹತ್ಯೆಗೆ ಕಾರಣವೇನು? ಯಾರ ಕೊಲೆ ಮಾಡಿದ್ದಾರೆಂಬ ಮಾಹಿತಿ ಇನ್ನಷ್ಟೇ ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ.
ಸುದ್ದಿ ಕುರಿತ ನಿಮ್ಮ ಅನಿಸಿಕೆ
+1
+1
+1
+1
+1
+1
+1