Top NewsUncategorizedತಂತ್ರಜ್ಞಾನದೇಶರಾಜಕೀಯರಾಜ್ಯ

ಸಾವಿನ ಹೆದ್ದಾರಿ ಸೇರಿದಂತೆ 26 ರಾಷ್ಟ್ರೀಯ ಹೆದ್ದಾರಿಗಳಿಗೆ ಸಚಿವರಿಂದ ಭೂಮಿಪೂಜೆ

ಹುಬ್ಬಳ್ಳಿ: ಹುಬ್ಬಳ್ಲಿಯ ಗಬ್ಬೂರ ವೃತ್ತದ ಟ್ರಕ್ ಟರ್ಮಿನಲ್ ಆವರಣದಲ್ಲಿ ಇಂದು ಭೂಸಾರಿಗೆ ಹಾಗೂ ಹೆದ್ದಾರಿ ಮಂತ್ರಾಲಯ,ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ,ಪಿಎಂ ಗತಿ ಶಕ್ತಿ,ಭಾರತಮಾಲಾ ಹಾಗೂ ಲೋಕೋಪಯೋಗಿ ಇಲಾಖೆಗಳ ಸಹಯೋಗದಲ್ಲಿ ಏರ್ಪಡಿಸಿದ್ದ 12,795 ಕೋಟಿ ರೂ.ವೆಚ್ಚದಲ್ಲಿ 925 ಕಿ.ಮೀ.ಉದ್ದದ ವಿವಿಧ 26 ರಾಷ್ಟ್ರೀಯ ಹೆದ್ದಾರಿಗಳ ಭೂಮಿಪೂಜೆ ಹಾಗೂ ಲೋಕಾರ್ಪಣೆ ಕಾರ್ಯಕ್ರಮವನ್ನು ಕೇಂದ್ರ ಭೂಸಾರಿಗೆ ಹಾಗೂ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವರಾದ ಪ್ರಲ್ಹಾದ ಜೋಷಿ, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೇಂದ್ರ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಖಾತೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ , ರಾಜ್ಯ ಸರ್ಕಾರದ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ , ಮಾಜಿ ಮುಖ್ಯಮಂತ್ರಿ ,ಶಾಸಕ ಜಗದೀಶ ಶೆಟ್ಟರ್,ಸಾರಿಗೆ ಮತ್ತು ಎಸ್‌ಟಿ ಕಲ್ಯಾಣ ಸಚಿವ ಬಿ.ಶ್ರೀರಾಮುಲು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ , ಗಣಿ, ಭೂವಿಜ್ಞಾನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ, ಕೈಮಗ್ಗ ಜವಳಿ, ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚಿವರಾದ ಶಂಕರ ಪಾಟೀಲ ಮುನೇನಕೊಪ್ಪ, ಕೊಪ್ಪಳ ಸಂಸದ ಸಂಗಣ್ಣ ಕರಡಿ,ಬಳ್ಳಾರಿ ಸಂಸದ ವೈ.ದೇವೇಂದ್ರಪ್ಪ, ಹಾವೇರಿ ಸಂಸದ ಶಿವಕುಮಾರ ಉದಾಸಿ, ಶಾಸಕರಾದ ಪ್ರಸಾದ ಅಬ್ಬಯ್ಯ, ಕಳಕಪ್ಪ ಬಂಡಿ, ಅರವಿಂದ ಬೆಲ್ಲದ, ಅಮೃತ ದೇಸಾಯಿ, ಸಿ.ಎಂ.ನಿಂಬಣ್ಣವರ, ವಿಧಾನ ಪರಿಷತ್ ಸದಸ್ಯರಾದ ಪ್ರದೀಪ ಶೆಟ್ಟರ್, ಎಸ್.ವಿ.ಸಂಕನೂರ, ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಈರಣ್ಣ ಜಡಿ, ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಸುದ್ದಿ ಕುರಿತ ನಿಮ್ಮ ಅನಿಸಿಕೆ
+1
0
+1
0
+1
0
+1
0
+1
0
+1
0
+1
0

Related Articles

Leave a Reply

Your email address will not be published. Required fields are marked *

Back to top button