ಜಿಲ್ಲೆ
ಚಿಕ್ಕಬಳ್ಳಾಪುರದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ನಗರಸಭೆ ಇಂಜಿನಿಯರ್
Municipal engineer falls into Lokayukta trap in Chikkaballapur
ಚಿಕ್ಕಬಳ್ಳಾಪುರ: ನಗರಸಭೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇಂಜಿನಿಯರ್ ಅರುಣ್ ಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಾಂಟ್ರಾಕ್ಟರ್ ಬಳಿ ಲಂಚದ ಹಣ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮಾಹಿತಿ ಪ್ರಕಾರ, 75 ಸಾವಿರ ರೂಪಾಯಿಗಳನ್ನು ಬೇಡಿಕೆ ಇಟ್ಟಿದ್ದ ಅರುಣ್ ಕುಮಾರ್, 35 ಸಾವಿರ ರೂಪಾಯಿ ಸ್ವೀಕರಿಸುವ ವೇಳೆ ಲೋಕಾಯುಕ್ತ ತಂಡ ದಾಳಿ ನಡೆಸಿ ಬಲೆ ಬೀಸಿತು.
ಈ ಕಾರ್ಯಾಚರಣೆಯನ್ನು ಚಿಕ್ಕಬಳ್ಳಾಪುರ ಲೋಕಾಯುಕ್ತ ಡಿವಿಎಸ್ಪಿ ನೇತೃತ್ವದಲ್ಲಿ ನಡೆಸಲಾಯಿತು. ಲಂಚ ಸ್ವೀಕರಿಸುವ ಸಮಯದಲ್ಲೇ ರೆಡ್ ಹ್ಯಾಂಡಡ್ ಆಗಿ ಸಿಕ್ಕಿಬಿದ್ದ ಈ ಘಟನೆಯಿಂದ ನಗರಸಭೆಯಲ್ಲಿ ದೊಡ್ಡ ಸಂಚಲನ ಉಂಟಾಗಿದೆ.
ವರದಿ. ಶಶಿಕಾಂತ್ ಕೊರವರ
ಸುದ್ದಿ ಕುರಿತ ನಿಮ್ಮ ಅನಿಸಿಕೆ
+1
+1
+1
+1
+1
+1
+1



