Top Newsಜಿಲ್ಲೆದೇಶರಾಜಕೀಯರಾಜ್ಯ
Trending

ನರೇಂದ್ರ ಮೋದಿ ಅವರನ್ನು ಚುನಾವಣೆ ಪ್ರಕ್ರಿಯೆಯಿಂದ ವಜಾಗೊಳಿಸಬೇಕು; ಸಚಿವ ಹೆಚ್.ಕೆ.ಪಾಟೀಲ್ ಆಗ್ರಹ

ಹುಬ್ಬಳ್ಳಿ: ದೇಶದ ಪ್ರಧಾನಿಯಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರಲ್ಲಿ ದ್ವೇಷ ಹರಡುವ ಭಾಷಣವನ್ನು ಮಾಡುತ್ತಿದ್ದು, ಇದನ್ನು ಚುನಾವಣೆ ಆಯೋಗ ಗಂಭೀರವಾಗಿ ಪರಿಗಣಿಸಿ ಚುನಾವಣೆ ಪ್ರಕ್ರಿಯೆಯಿಂದ ಮೋದಿ ಅವರನ್ನು ವಜಾಗೊಳಿಸಬೇಕೆಂದು ಸಚಿವ ಹೆಚ್.ಕೆ.ಪಾಟೀಲ್ ಆಗ್ರಹಿಸಿದ್ದಾರೆ.

ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರದ ಪ್ರಜಾಪ್ರಭುತ್ವದ ಕುರಿತು ಮೋದಿ ಅವರು ಬಳಸುತ್ತಿರುವ ಶಬ್ದ, ಭಾಷೆಗಳನ್ನು ನೋಡಿದರೇ ಓರ್ವ ಪಾಲಿಕೆ ಸದಸ್ಯ ಕೂಡಾ ಅಷ್ಟು ಕೆಳಮಟ್ಟದ ಮಾತುಗಳನ್ನು ಹೇಳುವುದಿಲ್ಲ, ಸಮಾಜದಲ್ಲಿ ದ್ವೇಷ ಹುಟ್ಟಿಸುವ ಮಾತುಗಳನ್ನು ಯಾರು ಈವರೆಗೆ ಆಡಿಲ್ಲ, ಆದರೆ ಮೋದಿಯವರು ಧರ್ಮಗಳ ಹೆಸರಿನಲ್ಲಿ ಧರ್ಮಿಯರ ಹೆಸರಿನಲ್ಲಿ, ದ್ವೇಷದ ಭಾಷಾ ಪ್ರಯೋಗ ಮಾಡಿದ್ದಾರೆ. ಭಾಷಣದಲ್ಲಿ ಮುಸ್ಲಿಂ ಸಮೂದಾಯವನ್ನೇ ಗುರಿಯಾಗಿಸಿಕೊಂಡು ದ್ವೇಷದ ಮಾತು ಆಡಿದ್ದಾರೆ. ಈ ಎಲ್ಲ ನೋಡಿದಾಗ ಚುನಾವಣೆ ಆಯೋಗ ಹೊರಡಿಸಿದ ನೀತಿ ಸಂಹಿತೆ ಸಂಪೂರ್ಣವಾಗಿ ಉಲ್ಲಂಘನೆ ಆಗಿದ್ದು, ಈ ಬಗ್ಗೆ ಚುನಾವಣೆ ಆಯೋಗ ಸುಮೋಟೋ ಪ್ರಕರಣವನ್ನು ದಾಖಲಿಸಿಕೊಂಡು ನರೇಂದ್ರ ಮೋದಿ ಅವರನ್ನು ಚುನಾವಣೆ ಪ್ರಕ್ರಿಯೆಯಿಂದ ವಜಾಗೊಳಿಸಬೇಕೆಂದು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಶಾಸಕ ಪ್ರಸಾದ್ ಅಬ್ಬಯ್ಯ, ಮಾಜಿ ಸಚಿವ ಎ.ಎಮ್.ಹಿಂಡಸಗಿರಿ, ಮುಖಂಡರಾದ ಅಲ್ತಾಪ್ ಹಳ್ಳೂರು ಸೇರಿದಂತೆ ಮುಂತಾದವರು ಇದ್ದರು.

ಸುದ್ದಿ ಕುರಿತ ನಿಮ್ಮ ಅನಿಸಿಕೆ
+1
0
+1
0
+1
0
+1
0
+1
1
+1
0
+1
0

Related Articles

Leave a Reply

Your email address will not be published. Required fields are marked *

Back to top button