ಹುಬ್ಬಳ್ಳಿ: ಕಾಲೇಜು ಆವರಣದಲ್ಲಿ ಯುವತಿಯ ಕೊಲೆ ಪ್ರಕರಣವನ್ನು ಖಂಡಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಬೃಹತ್ ಪ್ರತಿಭಟನೆ ನಡೆಸಿದ್ದು, ಆರೋಪಿಗೆ ಗಲ್ಲು ಶಿಕ್ಷೆ ನೀಡುವಂತೆ ಆಗ್ರಹಿಸಿದ್ದಾರೆ.
ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಲೇಜಿನ ಕ್ಯಾಂಪಸ್ ನಲ್ಲಿಯೇ ಚಾಕು ಇರಿದು ಕೊಲೆ ಮಾಡಿದ ದುಷ್ಕರ್ಮಿಗೆ ತಕ್ಕ ಶಿಕ್ಷೆ ನೀಡಬೇಕು. ಗಲ್ಲಿಗೇರಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು.
ಹುಬ್ಬಳ್ಳಿಯ ವಿದ್ಯಾನಗರದ ಬಿವಿಬಿ ಕಾಲೇಜಿ ಮುಂದೆ ಪ್ರತಿಭಟನೆ ನಡೆಸಿದ ಎಬಿವಿಪಿ ಕಾರ್ಯಕರ್ತರು,ರಾಜ್ಯ ಸರ್ಕಾರದ ವಿರುದ್ಧ ದಿಕ್ಕಾರ್ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನೇಹಾ ಹತ್ಯೆ ಮಾಡಿರುವ ಫಯಾಜ್‌ನನ್ನ ಗಲ್ಲಿಗೇರಿಸುವಂತೆ ಆಗ್ರಹಿಸಿದ್ದು, ರಸ್ತೆ ತಡೆದು ಟೈಯರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ಸುದ್ದಿ ಕುರಿತ ನಿಮ್ಮ ಅನಿಸಿಕೆ
+1
+1
+1
+1
+1
+1
+1