Top Newsಅಪರಾಧಜಿಲ್ಲೆರಾಜ್ಯ
Trending

ವಿಧ್ಯಾರ್ಥಿನಿ ಭೀಕರ ಹತ್ಯೆ: ಸಿಸಿ ಟಿವಿಯಲ್ಲಿ ಭಯಾನಕ ದೃಶ್ಯ ಸೆರೆ…

ಹುಬ್ಬಳ್ಳಿ: ಹುಬ್ಬಳ್ಳಿಯ ಕಾರ್ಪೋರೇಟರ್ ಮಗಳನ್ನು ಯುವಕನೊರ್ವ ಮನಬಂದಂತೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಇಲ್ಲಿನ ವಿದ್ಯಾನಗರದ ಬಿವ್ಹಿಬಿ ಕಾಲೇಜಿನ ಆವರಣದಲ್ಲಿ ನಡೆದಿದೆ.

ನೇಹಾ ಹಿರೇಮಠಗೆ ಚಾಕು ಇರಿಯುತ್ತಿರುವ ಆರೋಪಿ ಫಯಾಜ್

ನೇಹಾ ಹಿರೇಮಠ (24) ಮೃತ ದುರ್ದೈವಿಯಾಗಿದ್ದು, ಈಕೆ ಬಿವ್ಹಿಬಿ ಕಾಲೇಜಿನಲ್ಲಿ MCA ಮೊದಲನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದಳು, ಗುರುವಾರ ಪರೀಕ್ಷೆ ಮುಗಿಸಿ ವಾಪಾಸ್ ಮನೆಯತ್ತ ತೆರಳುತ್ತಿದ್ದ ವೇಳೆ ಸವದತ್ತಿ ತಾಲೂಕಿನ ಮುನವಳ್ಳಿಯ ಫೈಯಾಸ್ ಬಾಬುಸಾಹೇಬ ಕುಂದುನಾಯಕ (26) ಎಂಬಾತ ಚಾಕುವಿನಿಂದ ಕುತ್ತಿಗೆ, ಎದೆ ಹಾಗೂ ಬೆನ್ನಿಗೆ ಇರಿದಿದ್ದಾನೆ.‌ ಪರಿಣಾಮ ನೇಹಾ ತೀವ್ರವಾದ ರಕ್ತಸ್ರಾವಗೊಂಡಿದ್ದು, ಕೂಡಲೇ ಕಾಲೇಜಿನ ಸಹಪಾಠಿಗಳು ಕಿಮ್ಸ್ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಆದರೆ ಅದಾಗ್ಯೂ ಕೂಡಾ ಚಿಕಿತ್ಸೆ ಫಲಕಾರಿಯಾಗದೇ ಸ್ನೇಹಾ ಹಿರೇಮಠ ಕೊನೆ ಉಸಿರು ಎಳೆದಿದ್ದಾಳೆ.

ಹತ್ಯೆ ಗೈಯುತ್ತಿರುವ ವಿಡಿಯೋ

ಇನ್ನು ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ವಿದ್ಯಾನಗರ ಪೋಲಿಸರು ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಆರೋಪಿಯನ್ನು ಬಂಧಿಸಿರುವ ಪೋಲಿಸರು ತೀವ್ರ ವಿಚಾರಣೆ ನಡೆಸಿದ್ದಾರೆ. ಮೇಲ್ನೋಟಕ್ಕೆ ಪ್ರೀತಿಯ ವಿಚಾರವೇ ಕೊಲೆಗೆ ಕಾರಣ ಎಂದು ಹೇಳಲಾಗುತ್ತಿದ್ದು, ಈ ಬಗ್ಗೆ ಇನ್ನಷ್ಟೇ ಪೋಲಿಸರು ತಿಳಿಸಬೇಕಿದೆ.

ಕಿಮ್ಸ್ ಭೇಟಿ ನೀಡಿದ ಶಾಸಕ ಪ್ರಸಾದ್ ಅಬ್ಬಯ್ಯ ನೇಹಾ ಮೃತ ದೇಹವನ್ನು ನೋಡಿ ಕಣ್ಣಿರಾದರು. ಬಳಿಕ ಕುಟುಂಬಸ್ಥರಿಗೆ ಸಾಂತ್ವನ ಹೇಳುವ ಕೆಲಸ ಮಾಡಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ಪರೀಕ್ಷೆಗೆ ಹಾಜರಾಗಿ ಮನೆಗೆ ಬರುವ ವೇಳೆಯಲ್ಲಿ ಈ ದುರ್ಘಟನೆ ನಡೆದಿದ್ದು, ಕಾಲೇಜಿನಲ್ಲಿ ಇಂತಹ ಕೃತ್ಯ ನಡೆಯುತ್ತದೆ ಎಂದರೆ ಅಲ್ಲಿನ ಭದ್ರತೆ ಬಗ್ಗೆ ಪ್ರಶ್ನೆ ಮೂಡುತ್ತದೆ. ಇದರ ಬಗ್ಗೆ ಕೂಲಂಕಷವಾಗಿ ತನಿಖೆಗೆ ನಾನು ಒತ್ತಾಯಿಸುವೆ ಎಂದು ಹೇಳಿದ್ದಾರೆ.

ಕಿಮ್ಸ್ ಮುಂಭಾಗದಲ್ಲಿ ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂಧನ: ಇನ್ನು ನೇಹಾ ಚಿಕಿತ್ಸೆ ಫಲಿಸದೇ ಮೃತಪಡುತ್ತಿದ್ದಂತೆ, ಕುಟುಂಬಸ್ಥರ ಆಕ್ರಂಧನ ಮುಗಿಲು ಮುಟ್ಟಿತ್ತು. ಈ ವೇಳೆ ಕೊಲೆ ಗೈದ ಆರೋಪಿಗೆ ತಕ್ಕ ಶಿಕ್ಷೆ ಆಗಬೇಕೆಂದು ಒತ್ತಾಯಿಸಿದರು.

ಸುದ್ದಿ ಕುರಿತ ನಿಮ್ಮ ಅನಿಸಿಕೆ
+1
0
+1
0
+1
0
+1
0
+1
0
+1
0
+1
4

Related Articles

Leave a Reply

Your email address will not be published. Required fields are marked *

Back to top button