ಧಾರವಾಡದ ಸೋನಿಯಾ ಕಾಲೇಜಿನಲ್ಲಿ ನಶಾ ಮುಕ್ತ ಭಾರತ ಅಭಿಯಾನ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧನೆ ಕಾರ್ಯಕ್ರಮ….

ಧಾರವಾಡ: ಧಾರವಾಡದ ಸೋನಿಯಾ ಪದವಿ ಮಹಾವಿದ್ಯಾಲಯದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ ಭಾರತ ಸರ್ಕಾರ ನಶಾ ಮುಕ್ತ ಭಾರತ ಅಭಿಯಾನ ಪ್ರಯುಕ್ತ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರಕಾಶ್ ಜೋಗಿನ್ ಅಧ್ಯಕ್ಷತೆಯಲ್ಲಿ ವಿದ್ಯಾರ್ಥಿಗಳಿಗೆ ಇವತ್ತಿನ ಸಮಾಜದಲ್ಲಿ ಯುವಕರು ದುಶ್ಚಟಗಳಿಗೆ ಬಲಿಯಾಗುತ್ತಿದ್ದು. ಅಲ್ಲದೆ ಸಮಾಜ ಹಾಳು ಮಾಡು ಮೂಲಕ ಅಲ್ಲದೆ ವಿದ್ಯಾರ್ಥಿಗಳು ಸಹಿತ ಇಂದು ದುಶ್ಚಟಗಳಿಗೆ ಬಲಿಯಾಗುತ್ತಿರುವುದು ದುಃಖಕರ ಎಂದು ಹೇಳಿದರು.
ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಉತ್ತಮವಾದ ಆರೋಗ್ಯವನ್ನು ಕಾಪಾಡಿಕೊಂಡು ಯೋಗ . ಮತ್ತು ವ್ಯಾಯಾಮ. ಕ್ರೀಡೆ. ಹೀಗೆ ಹಲವಾರು ಸ್ಪರ್ಧೆಗಳಲ್ಲಿ ಭಾಗವಹಿಸಬೇಕು. ಶಿಕ್ಷಣ ಕಡೆ ಹೆಚ್ಚಿನ ಒತ್ತು ಕೊಡಬೇಕು. ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳನ್ನು ಪಡೆಯುವುದರ ಮೂಲಕ ತಮ್ಮ ಜೀವನವನ್ನು ರೂಪಿಸಿಕೊಳ್ಳಬೇಕೆಂದು ಹೇಳಿದರು.
ಕಾರ್ಯಕ್ರಮದಲ್ಲಿ ನಶಾ ಮುಕ್ತ ಭಾರತ ಅಭಿಯಾನದ ಪ್ರತಿಜ್ಞಾವಿಧಿ ಬೋಧನೆಯನ್ನು ವಿದ್ಯಾರ್ಥಿಗಳಿಗೆ ಮತ್ತು ಎಲ್ಲ ಉಪನ್ಯಾಸಕ ವೃಂದಕ್ಕೆ ಪ್ರೊ ಗಂಗಾಧರ ಎಸ್.ಮರಳಿಹಳ್ಳಿ ಬೋಧಿಸಿದರು. ನಂತರ ವಿದ್ಯಾರ್ಥಿಗಳ ಪ್ರತಿಭೆಯ ಕಲೆಯನ್ನು ಆಯ್ಕೆ ಮಾಡಲಾಯಿತು..




