ದಾವಣಗೆರೆ: ರಸ್ತೆ ಅಪಘಾತದಲ್ಲಿ ಗಾಯಗೊಂಡು ನರಳಾಡುತ್ತಿದ್ದ ವ್ಯಕ್ತಿಯ ನೆರವಿಗೆ ಧಾವಿಸಿದ ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಮಾನವೀಯತೆಯ ಮೆರೆದಿರುವ ಘಟನೆ ನಡೆದಿದೆ.
ಹೌದು, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದಾವಣಗೆರೆ ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ ಅವರ ಪರವಾಗಿ ಪ್ರಚಾರ ಕಾರ್ಯ ಮುಗಿಸಿಕೊಂಡು ವಾಪಾಸ್ ಬರುವ ಸಂದರ್ಭದಲ್ಲಿ ಹರಿಹರದ ಸಮೀಪದ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿ -4 ರಲ್ಲಿ ವ್ಯಕ್ತಿಯೊರ್ವ ರಸ್ತೆ ಅಪಘಾತವಾಗಿ ನಡುರಸ್ತೆಯಲ್ಲಿಯೇ ನರಳಾಡುತ್ತಿದ್ದ ಇದೇ ಮಾರ್ಗದಲ್ಲಿ ಚಲಿಸುತ್ತಿದ್ದ ಶಾಸಕ ವಿನಯ ಕುಲಕರ್ಣಿ ತಮ್ಮ ಕಾರನ್ನು ನಿಲ್ಲಿಸಿ ಆಂಬುಲೆನ್ಸ್ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದರು.
ಕೆಲಸದ ಒತ್ತಡದ ಸಮಯದಲ್ಲಿ ಶಾಸಕರು ಗಾಯಾಳನ್ನು ಸಾಗಿಸಲು ಎಲ್ಲ ವ್ಯವಸ್ಥೆ ಮಾಡಿದರು. ಗಾಯಾಳುವಿಗೆ ನೆರವಾದ ಶಾಸಕರ ಮಾನವೀಯತೆ ಕಾರ್ಯ ಸ್ಥಳೀಯರು ಮೆಚ್ಚುಗೆಗೆ ಪಾತ್ರವಾಯಿತು.
ಸುದ್ದಿ ಕುರಿತ ನಿಮ್ಮ ಅನಿಸಿಕೆ
+1
+1
1
+1
1
+1
+1
+1
+1