ಜಿಲ್ಲೆ
ನಶಾ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮ

ಹುಬ್ಬಳ್ಳಿ: ತಾಲೂಕಿನ ಅದರಗುಂಚಿ ಗ್ರಾಮದ ಸಿ.ಐ.ಸಿ ಸರ್ಕಾರಿ ಪ್ರೌಢಶಾಲೆಯಲ್ಲಿ ನಶಾ ಭಾರತ ಅಭಿಯಾನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಈ ವೇಳೆ ವಿದ್ಯಾರ್ಥಿಗಳಿಗೆ ದೇಶದಲ್ಲಿ ಹೆಚ್ಚಾಗಿ ಯುವಕರು ಇದ್ದಾರೆ. ಯುವಕರು ಮಾದಕ ವಸ್ತುಗಳಿಗೆ ದಾಸರಾಗುತ್ತಿದ್ದಾರೆ. ಮಾದಕ ವಸ್ತುಗಳನ್ನು ಬಳಸದಂತೆ ಯುವಕರಿಗೆ ತಿಳಿ ಹೇಳಬೇಕಿದೆ. ಈ ನಿಟ್ಟಿನಲ್ಲಿ ನಶಾ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಸದೃಢ ದೇಶ ಕಟ್ಟಲು ಯುವಕರ ಕೊಡುಗೆ ಅವಶ್ಯಕ ಎಂದು ಜಾಗೃತಿ ಮೂಡಿಸಲಾಯಿತು.
ಈ ಸಂದರ್ಭದಲ್ಲಿ ನಶಾ ಮುಕ್ತ ಭಾರತ ಅಭಿಯಾನದ ಪ್ರಮಾಣ ವಚನವನ್ನು ವಿದ್ಯಾರ್ಥಿಗಳು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ವಿ.ಆರ್.ಡಬ್ಲೂ ಬಸವರಾಜ ಸೋಮಕ್ಕನವರ, ಮುಖ್ಯೋಪಾಧ್ಯಾಯರಾದ ಜಿ.ವಾಯ್.ದಾಶ್ಯಾಳ, ಶಾಲೆಯ ಸಿಬ್ಬಂದಿ, ವಿದ್ಯಾರ್ಥಿಗಳು ಇತರರು ಭಾಗವಹಿಸಿದ್ದರು.
ಸುದ್ದಿ ಕುರಿತ ನಿಮ್ಮ ಅನಿಸಿಕೆ
+1
+1
+1
+1
+1
+1
+1




