
ಹುಬ್ಬಳ್ಳಿ: ಹುಬ್ಬಳ್ಳಿಯ ಬೈರಿದೇವರಕೊಪ್ಪ ಗ್ರಾಮದ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತ ವೃಂದದಿಂದ ಶ್ರೀಅಯ್ಯಪ್ಪ ಸ್ವಾಮಿಯ ಇರುಮುಡಿ ಮೂಲಕ ಅಯ್ಯಪ್ಪ ಸ್ವಾಮಿ ಯಾತ್ರೆಯನ್ನ ಕೈಗೊಂಡರು.

ಇದೇ ವೇಳೆ 18ನೇ ವರ್ಷದ ಶಬರಿಮಲೆ ಯಾತ್ರೆಯನ್ನು ಕೈಗೊಂಡಿರುವ ಮಂಜುನಾಥ ಗುರುಸ್ವಾಮಿ ಮತ್ತು ನಾರಾಯಣ ಗುರುಸ್ವಾಮಿ ನೇತೃತ್ವದಲ್ಲಿ ಅಯ್ಯಪ್ಪ ಸ್ವಾಮಿ ಶಿಷ್ಯ ವೃಂದ ವಿಶೇಷ ಪೂಜೆ ಸಲ್ಲಿಸಿ, ಇರುಮುಡಿ, ತುಪ್ಪದ ಕಾಯಿಯನ್ನು ತುಂಬಿ ಅಯ್ಯಪ್ಪ ಸ್ವಾಮಿಯ ಭಕ್ತಾದಿಗಳಿಗೆ ಅಯ್ಯಪ್ಪ ಸ್ವಾಮಿಯ ಅನುಗ್ರಹ ನೀಡಲಿ ಎಂದು ಪ್ರಾರ್ಥಿಸಿದರು.

ಅಯ್ಯಪ್ಪ ಭಕ್ತಾದಿಗಳು ಭಕ್ತಿಯಿಂದ ಅಯ್ಯಪ್ಪ ಸ್ವಾಮಿಯ ಪೂಜೆಯಲ್ಲಿ ಪಾಲ್ಗೊಂಡು ಇರುಮುಡಿಗೆ ಅಕ್ಕಿಯನ್ನು ಹಾಕಿ ತಮ್ಮ ಇಷ್ಟಾರ್ಥಗಳನ್ನು ದೇವರಲ್ಲಿ ಬೇಡಿಕೊಂಡರು.
ಈ ಸಂದರ್ಭದಲ್ಲಿ ಸ್ವಾಮಿಗಳಾದ ಕಲ್ಲಪ್ಪ ಮಣಿಕಂಠ ಸ್ವಾಮಿಗಳು ಹಾಗೂ ಇನ್ನಿತರ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು, ನೂರಾರು ಭಕ್ತಾದಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.
ಸುದ್ದಿ ಕುರಿತ ನಿಮ್ಮ ಅನಿಸಿಕೆ
+1
+1
+1
+1
+1
+1
+1




