ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಒತ್ತಯಿಸಿ SDPI ಪ್ರತಿಭಟನೆ
ಹುಬ್ಬಳ್ಳಿ: ಸಚಿವ ಕೆ.ಎಸ್.ಈಶ್ವರಪ್ಪ ಅವರ ರಾಜೀನಾಮೆ ಒತ್ತಾಯಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ನಗರದಲ್ಲಿಂದು ಪ್ರತಿಭಟನೆ ನಡೆಸಿ ತಹಶಿಲ್ದಾರಿಗೆ ಮನವಿ ಸಲ್ಲಿಸಿದರು.
ನಂತರ ಮಾತನಾಡಿದ ಎಸ್.ಡಿ.ಪಿ.ಐ ಪಕ್ಷದ ಜಿಲ್ಲಾ ಅಧ್ಯಕ್ಷರಾದ ಇರ್ಷಾದ್ ಅಹ್ಮದ್ ಅತ್ತಾರ ಮಾತನಾಡಿ, ಸಚಿವ ಕೆ.ಎಸ್.ಈಶ್ವರಪ್ಪ ಅವರು ಜವಾಬ್ದಾರಿಯುತ ಸ್ಥಾನದಲ್ಲಿದ್ದಾರೆ. ಅವರು ಕೊಲೆ ಸಂಭವಿಸಿ ಇನ್ನೂ ಪೋಲಿಸ್ ವಿಚಾರಣೆ ಪೂರ್ಣಗೊಳ್ಳುವ ಮೊದಲೇ ಸಚಿವರು ಮುಸ್ಲಿಂ ಗೂಂಡಾಗಳು ಎಂದು ಹೇಳಿಕೆ ನೀಡುವ ಮೂಲಕ ತನಿಖೆಯ ದಾರಿ ತಪ್ಪಿಸುವ ಕೆಲಸ ಮಾಡಿದಲ್ಲದೇ, ಸಾರ್ವಜನಿಕರ ಮೇಲೆ ದಾಳಿ ಮಾಡಲು ಪ್ರಚೋದನೆಗೆ ಕಾರಣವಾಗಿದ್ದಾರೆ. ಶಿವಮೊಗ್ಗದಲ್ಲಿ ನಿಷೇದಾಜ್ಞೆ ಜಾರಿಯಲ್ಲಿದ್ದ ಸಂದರ್ಭದಲ್ಲಿ ನಿಯಮವನ್ನು ಗಾಳಿಗೆ ತೂರಿ ಸಚಿವ ಈಶ್ವರಪ್ಪ, ಸಂಸದ ರಾಘವೇಂದ್ರ ಅವರು ಶವಯಾತ್ರೆ ನಡೆಸಿ ಹಿಂಸಾಚಾರಕ್ಕೆ ಕಾರಣರಾಗಿದ್ದಾರೆ ಎಂದು ಆರೋಪಿಸಿದರು.
ಹಿಂಸಾಚಾರಕ್ಕೆ ಪ್ರಚೋದಿಸಿ ಶಿವಮೊಗ್ಗ ಜಿಲ್ಲೆಯ ಶಾಂತಿ ಕದುಡುವಲ್ಲಿ ಈಶ್ವರಪ್ಪ ಅವರು ಕಾರಣರಾಗಿದ್ದು, ಹಿಂಸಾಚಾರಕ್ಕೆ ಪ್ರಚೋದಿಸಿ ಶಿವಮೊಗ್ಗ ಜಿಲ್ಲೆಯ ಸೌಹಾರ್ದತೆಗೆ ಧಕ್ಕೆ ತಂದಿದ್ದಾರೆ. ಹೀಗಾಗಿ ಅವರನ್ನು ಸಚಿವ ಸ್ಥಾನದಿಂದ ಸರ್ಕಾರ ವಜಾಗೊಳಿಸಬೇಕು ಹಾಗೂ ಅವರ ಶಾಸಕ ಸ್ಥಾನವನ್ನು ವಜಾಗೊಳಿಸಿ ಅನರ್ಹಗೊಳಿಸಿ ಕೂಡಲೇ ಕಾನೂನು ಕ್ರಮ ಕೈಗೊಂಡು ಬಂಧಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನಾ ಸಂದರ್ಭದಲ್ಲಿ ಪಕ್ಷದ ಉಪಾಜಿಲ್ಲಾಧ್ಯಕ್ಷ ಸಮೀರ್ ಬೆಟಗೇರಿ, ಇಸ್ಮಾಯಿಲ್ ನಾಲಬಂದ, ಅಜಂ ಪಠಾಣ, ಮಹಮ್ಮದ್ ರಫೀಕ ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು.