ಹುಬ್ಬಳ್ಳಿ: ತಾಲೂಕಿನ ಕುಂದಗೋಳ ವಿಧಾನಸಭಾ ಕ್ಷೇತ್ರದ ಅದರಗುಂಚಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಕೊಟಗೊಂಡಹುಣಸಿ, ಅದರಗುಂಚಿ ಪ್ಲಾಟ್’ನ ಮಾಜಿ ಶಾಸಕ ಎಸ್.ಐ. ಚಿಕ್ಕನಗೌಡರ ಅವರ ಅಭಿಮಾನಿಗಳು ಹಾಗೂ ಬಿಜೆಪಿಯ ಕಾರ್ಯಕರ್ತರು ಬಿಜೆಪಿ ತೊರೆದು ಕಾಂಗ್ರೆಸ್’ಗೆ ಸೇರ್ಪಡೆಯಾದರು.
ಧಾರವಾಡ ಕಾಂಗ್ರೆಸ್ ಅಭ್ಯರ್ಥಿಯಾದ ವಿನೋದ್ ಅಸೂಟಿ ಅವರ ನೇತೃತ್ವದಲ್ಲಿ ಬಿಜೆಪಿ ಬೆಂಬಲಿತ ಗ್ರಾಪಂ ಸದಸ್ಯರಾದ ಮಕ್ತುಂಹುಸೇನ್ ಬಡಿಗೇರ, ಯಲ್ಲಪ್ಪಗೌಡ ಭರಮಗೌಡ್ರ, ಹೊನ್ನಪ್ಪ ಸೋಲಾರಗೊಪ್ಪ, ದಿವಾನಸಾಬ್ ಕಮಲಸಾಬನವರ, ಮುಖಂಡರಾದ ಚನ್ನಪ್ಪ ರೇವಣ್ಣನವರ, ಗುರುನಾಥ ಹರಿಜನ, ಚನ್ನಬಸನಗೌಡ ವೀರನಗೌಡ್ರ ಹಾಗೂ ಇನ್ನಿತರ ಹಿರಿಯ ಮುಖಂಡರು ಕಾಂಗ್ರೆಸ್ ಸೇರ್ಪಡೆಯಾದರು.
ಬಳಿಕ ಗ್ರಾಮಸ್ಥರು ವಿನೋದ್ ಅಸೂಟಿಯವರನ್ನು ಆತ್ಮೀಯವಾಗಿ ಸನ್ಮಾನಿಸಿದರು. ಇದೇ ವೇಳೆ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡ ಸದಸ್ಯರು ಧಾರವಾಡ ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗಾಗಿ ಶ್ರಮಿಸುತ್ತೇವೆ ಎಂದು ತಿಳಿಸಿದರು.
ಸುದ್ದಿ ಕುರಿತ ನಿಮ್ಮ ಅನಿಸಿಕೆ
+1
1
+1
+1
+1
+1
+1
+1