ಹುಬ್ಬಳ್ಳಿ: ಅಪ್ರಾಪ್ತ ಬಾಲಕಿಯನ್ನು ನಂಬಿಸಿ ಲೈಂಗಿಕ ದೌರ್ಜನ್ಯ ಎಸಗಿ, ಗರ್ಭಿಣಿ ಮಾಡಿದಲ್ಲದೇ, ಬಳಿಕ ಕಣ್ಣತಪ್ಪಿಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ನವನಗರ ಪೋಲಿಸರು ಯಶಸ್ವಿಯಾಗಿದ್ದಾರೆ.
ಸದ್ದಾಂಹುಸೇನ (19) ಬಂಧಿತ ಆರೋಪಿಯಾಗಿದ್ದು, ಈತ ನವನಗರ ಪೋಲಿಸ ಠಾಣಾ ವ್ಯಾಪ್ತಿಯಲ್ಲಿನ 17 ವರ್ಷದ ಯುವತಿಯನ್ನು ನಂಬಿಸಿ, ಲೈಂಗಿಕ ದೌರ್ಜನ್ಯ ಎಸಗಿ ಮೋಸ ಮಾಡಿದ್ದಾನೆಂದು ಬಾಲಕಿಯ ಪೋಷಕರು ದೂರಿನಲ್ಲಿ ತಿಳಿಸಿದ್ದಾರೆ.
ಪೋಷಕರು ನೀಡಿರುವ ದೂರಿನ ಪ್ರತಿ
ಅಪ್ರಾಪ್ತ ಬಾಲಕಿ ಇಂದು ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಪೋಷಕರು ಬಾಲಕಿಯನ್ನು ಆಸ್ಪತ್ರೆಗೆ ಕರೆದೊಯ್ದ ತಪಾಸಣೆ ಮಾಡಿಸಿದ್ದಾರೆ. ಈ ವೇಳೆ ಬಾಲಕಿ ಗರ್ಭಿಣಿಯಾಗಿರುವ ಸಂಗತಿ ಗೊತ್ತಾಗಿದೆ. ಆ ಬಳಿಕ ಯುವತಿಯ ಪೋಷಕರು ಬೆಚ್ಚಿ ಬಿದ್ದಿದ್ದಾರೆ.
ಸದ್ಯ ಈ ಕುರಿತು ನವನಗರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಬಲವಂತವಾಗಿ ಲೈಂಗಿಕ ಸಂಭೋಗ, ಜೀವ ಬೆದರಿಕೆ, ಜಾತಿ ನಿಂದನೆ ಆರೋಪದ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೋಲಿಸರು ಆರೋಪಿಯನ್ನು ಬಂಧಿಸಿ, ತನಿಖೆ ಕೈಗೊಂಡಿದ್ದಾರೆ. ಈ ಬಗ್ಗೆ ಹು-ಧಾ ಪೋಲಿಸ್ ಆಯುಕ್ತೆ ರೇಣುಕಾ ಸುಕುಮಾರ ಮಾಹಿತಿ ನೀಡಿದ್ದಾರೆ.
ರೇಣುಕಾ ಸುಕುಮಾರ, ಪೋಲಿಸ್ ಆಯುಕ್ತರು
ಇದಕ್ಕೂ ಮೊದಲು ಹಿಂದೂಪರ ಸಂಘಟನೆಗಳು ಹಾಗೂ ಬಿಜೆಪಿ ಕಾರ್ಯಕರ್ತರು ಆರೋಪಿ ಸದ್ದಾಂಹುಸೇನ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ಕಾನೂನು ಅಡಿಯಲ್ಲಿ ಕ್ರಮ ಕೈಗೊಳ್ಳಬೇಕೆಂದು ಎಪಿಎಂಸಿ ಪೋಲಿಸ ಠಾಣೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.
ನವನಗರ ಪೋಲಿಸ್ ಠಾಣೆಯ ಮುಂಭಾಗದಲ್ಲಿ ಆರೋಪಿ ಬಂಧಿಸಲು ಮತ್ತು ಎಫ್ ಐಆರ್ ದಾಖಲಿಸಲು ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ