ಹುಬ್ಬಳ್ಳಿ: ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು ಪೋಲಿಸ್ ಇಲಾಖೆಯಿಂದ ಅಗತ್ಯ ಸಿದ್ದತೆ ಮಾಡಿಕೊಳ್ಳಲಾಗಿದ್ದು, ಭದ್ರತೆಗೆ 4000 ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ ಎಂದು ಹು-ಧಾ ಪೋಲಿಸ್ ಆಯುಕ್ತೆ ರೇಣುಕಾ ಸುಕುಮಾರ ಹೇಳಿದರು.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಭದ್ರತೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ತಮಿಳುನಾಡಿಯಿಂದ ಹೆಚ್ಚಿನ ಸಿಬ್ಬಂದಿ ಕರೆಸಿಕೊಳ್ಳಲಾಗಿದೆ. ಅದರಂತೆ ಸಿಆರ್’ಪಿಎಫ್, ಕೆಎಸ್ಆರ್’ಪಿ ತುಕಡಿ ಸೇರಿದಂತೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಬಂದಿದ್ದಾರೆ ಎಂದರು.
ಈಗಾಗಲೇ ಸೂಕ್ಷ್ಮ ಮತ್ತು ಸಾಮಾನ್ಯ ಬೂತ್’ಗಳನ್ನು ಗುರುತಿಸಲಾಗಿದೆ. ಸೂಕ್ಷ್ಮ ಬೂತ್’ಗಳಲ್ಲಿ ಇಬ್ಬರು, ಸಾಮಾನ್ಯ ಬೂತ್’ನಲ್ಲಿ ಒಬ್ಬರನ್ನು ನೇಮಕ ಮಾಡಲಾಗಿದೆ. ಈ ಎಲ್ಲ ಪ್ರಕ್ರಿಯೆ ನೋಡಿಕೊಳ್ಳಲು 42 ಸೆಕ್ಟರ್ ಮೊಬೈಲ್ ವಾಹನಗಳನ್ನು ಇರಿಸಲಾಗಿದೆ. ಇದನ್ನು ಪಿಎಸ್ಐ, ಎಎಸ್ಐ ನೇತೃತ್ವದಲ್ಲಿ ಪೆಟ್ರೋಲಿಂಗ್ ಕಾರ್ಯ ನಡೆಯಲಿದೆ. ಇವರ ಮೇಲೆ 11 ಸೂಪರವೈಸರ್ ಮೊಬೈಲ್ ವಾಹನಗಳು ಇನ್ಸ್ಪೆಕ್ಟರ್ ನೇತೃತ್ವದಲ್ಲಿ ಕೆಲಸ ಮಾಡಲಿವೆ ಎಂದು ಹೇಳಿದರು.