Top NewsUncategorizedಜಿಲ್ಲೆರಾಜಕೀಯರಾಜ್ಯ
ನಾವು ಯಾರಿಗೂ ರಾಜೀನಾಮೆ ನೀಡಿ ಎಂದು ಹೇಳಿಲ್ಲ : ಡಿ.ಕೆ.ಶಿವಕುಮಾರ್
ಹುಬ್ಬಳ್ಳಿ: ನಾವು ಯಾರಿಗೂ ರಾಜೀನಾಮೆ ನೀಡಿ ಎಂದು ಹೇಳುತ್ತಿಲ್ಲ. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರೇ 2500 ಕೋಟಿ ಕೊಟ್ಟರೆ ಸಿಎಂ ಹುದ್ದೆ ಕೊಡುತ್ತಾರೆಂದು ಹೇಳಿದ್ದಾರೆ ಅದರ ಬಗ್ಗೆ ಉತ್ತರಿಸಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹರಿಹಾಯ್ದರು.
ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಮಠದ ಕಾರ್ಯಕ್ರಮದ ನಿಮಿತ್ತವಾಗಿ ಬಂದಿದ್ದೇನೆ. ಇದರ ಜೊತೆಗೆ ಮುಂಬರುವ ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಬೆಳಗಾವಿ, ವಿಜಯಪುರ, ಬಾಗಲಕೋಟೆ ಅಭ್ಯರ್ಥಿಗಳ ಪೂರ್ವಭಾವಿ ಸಭೆ ನಡೆಸುತ್ತಿದ್ದೇನೆ ಎಂದರು.
ಇನ್ನು, ಸಾರಿಗೆ ಸಚಿವ ಬಿ.ರಾಮುಲು ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ನಾವು ಯಾವ ಸಾಕ್ಷಿ ಕೊಡಬೇಕು? ಏತಕ್ಕೆ ಕೊಡಬೇಕು? ಬಿಜೆಪಿ ಶಾಸಕ ಬಸನಗೌಡ ಯತ್ನಾಳ ಅವರೇ 2500 ಕೋಟಿ ಕೊಟ್ಟರೆ ಸಿಎಂ ಆಗಬಹುದು ಎಂದು ಹೇಳಿದ್ದಾರೆ ಅವರೇ ಸಾಕ್ಷಿ ಕೊಟ್ಟಿದ್ದಾರೆಂದು ದೂರಿದರು.
ಸುದ್ದಿ ಕುರಿತ ನಿಮ್ಮ ಅನಿಸಿಕೆ
+1
+1
+1
+1
+1
+1
+1